
ಪ್ರಗತಿವಾಹಿನಿ ಸುದ್ದಿ: ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಕೌಟುಂಬಿಕ ಕಲಹದಿಂದ ಬೇಸತ್ತು ದಂಪತಿ ಸಾವಿಗೆ ಶರಣಾಗಿದ್ದಾರೆ
ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಾನುಚಂದ್ರ ರೆಡ್ಡಿ ಹಾಗೂ ಸಾಜಿಯಾ ಆತ್ಮಹತ್ಯೆ ಮಾಡಿಕೊಂಡವರು.
ಮೊದಲು ಪತಿ ಬಾನುಚಂದ್ರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿಯ ಶವ ಕಂಡು ಪತ್ನಿ ಸಾಜಿಯಾ 17ನೇ ಫ್ಲೋರ್ ನಿಂದ ಜಿಗಿದು ಸಾವಿಗೆ ಶರಣಾಗಿದ್ದಾಳೆ. ಪತಿ-ಪತ್ನಿ ಇಬ್ಬರೂ ಖಾಸಗಿ ಕಂಪನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

