Latest

*ಆತ್ಮಹತ್ಯೆಗೆ ಶರಣಾದ ದಂಪತಿ*

ಪ್ರಗತಿವಾಹಿನಿ ಸುದ್ದಿ: ಅನಾರೋಗ್ಯದಿಂದ ಬೇಸತ್ತ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಷಣ್ಮುಖಪ್ಪ (65) ಹಾಗೂ ಇಂದ್ರಮ್ಮ (50) ಆತ್ಮಹತ್ಯೆ ಮಾಡಿಕೊಂಡ ದಂಪತಿ. ದಂಪತಿ ಮನೆಯಲ್ಲಿಯೇ ಕ್ರಿಮಿನಾಷಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತೀವ್ರ ಅಸ್ವಸ್ಥರಾಗಿದ್ದ ಇಬ್ಬರನ್ನೂ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆದರೆ ಷಣ್ಮುಗಪ್ಪ ಆಸ್ಪತ್ರೆ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾರೆ. ಪತ್ನಿ ಇಂದ್ರಮ್ಮ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ದಂಪತಿ ಮಾನಸಿಕವಾಗಿ ಕುಗ್ಗಿಹೋಗಿದ್ದರು. ನೋಡಿಕೊಳ್ಳಲೂ ಯಾರೂ ಇರಲಿಲ್ಲ. ಇದರಿಂದ ಮನನೊಂದು ದುಡುಕಿನ ನಿರ್ಧರ ಕೈಗೊಂಡಿದ್ದಾರೆ.

ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button