
ಪ್ರಗತಿವಾಹಿನಿ ಸುದ್ದಿ: ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಮೈದಾನದಲ್ಲಿ ನಡೆದಿದೆ.
ಪುರುಷ ಹಾಗೂ ಮಹಿಳೆಯೊಬ್ಬರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಇಬ್ಬರು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ವಿಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.