*ಇಬ್ಬರು ಮಕ್ಕಳೊಂದಿಗೆ ದಂಪತಿ ಶವವಾಗಿ ಪತ್ತೆ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಇಬ್ಬರು ಮಕ್ಕಳೊಂದಿಗೆ ದಂಪತಿ ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿರುವ ಘಟನೆ ಮೈಸೂರಿನ ಚಾಮುಂಡಿಪುರ ಬಡಾವಣೆಯಲ್ಲಿ ನಡೆದಿದೆ. ಮಹದೇವಸ್ವಾಮಿ, ಪತ್ನಿ ಅನಿತಾ ಹಾಗೂ ಇಬ್ಬರು ಮಕ್ಕಳ ಶವ ಮನೆಯಲ್ಲಿ ಪತ್ತೆಯಾಗಿದೆ. ಓರ್ವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಹದೇವಸ್ವಾಮಿ ಮಳಿಗೆಯೊಂದನ್ನು ಹೊಂದಿದ್ದರು ಎಂದು ತಿಳಿದುಬಂದಿದೆ. ಇದೀಗ ದಂಪತಿ ಹಾಗೂ ಇಬ್ಬರು ಮಕ್ಕಳು ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿದ್ದು, ಅನುಮನಕ್ಕೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.Home add -Advt … Continue reading *ಇಬ್ಬರು ಮಕ್ಕಳೊಂದಿಗೆ ದಂಪತಿ ಶವವಾಗಿ ಪತ್ತೆ*