Latest

ಲಂಚ; 4 ವರ್ಷ ಜೈಲುಶಿಕ್ಷೆ ವಿಧಿಸಿದ ಕೋರ್ಟ್

ಪ್ರಗತಿವಾಹಿನಿ ಸುದ್ದಿ; ತುಮಕೂರು: ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದ ಸರ್ವೇಯರ್ ಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

2015, ಏಪ್ರಿಲ್ 15ರಂದು ರೈತನಿಂದ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದ ಸರ್ವೇಯರ್ ಎಂ.ಜಿ.ರಂಗರಾಜು ಎಂಬಾತನಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ ತುಮಕೂರಿನ 7ನೇ ಅಧಿಕ ಮತ್ತು ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಜಮೀನು ಹದ್ದುಬಸ್ತ್ ಮಾಡಿಕೊಡಲು ರಂಗರಾಜು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದೇ ವಿಚಾರವಾಗಿ ರೈತರೊಬ್ಬರಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ರಂಗರಾಜು ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತುಮಕೂರು ವಿಶೇಷ ಕೋರ್ಟ್ ನ್ಯಾಯಾಧೀಶ ಸುದೀಂದ್ರನಾಥ್ ಅಪರಾಧಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಪ್ರಕಟಿಸಿದ್ದಾರೆ.
ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸ್ಕೆಚ್; ಕಾಂಗ್ರೆಸ್ ಮುಖಂಡ ಸೇರಿ ಇಬ್ಬರು ಪೊಲೀಸ್ ವಶಕ್ಕೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button