Kannada NewsKarnataka NewsLatest
*ಕೋರ್ಟ್ ಸಿಬ್ಬಂದಿಗಳ ಕಾರು ಭೀಕರ ಅಪಘಾತ: ಸೇತುವೆಗೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮುಡಿಗುಂಡ ಸೇತುವೆ ಬಳಿ ತಡರಾತ್ರಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಕಾರು ಸೇತುವೆಯ ತಡೆಗೋಡೆಗೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಮೃತರು ಕೊಳ್ಳೇಗಾಲ ನ್ಯಾಯಾಲಯದ ಸಿಬ್ಬಂದಿಗಳು ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




