Politics

*ಕೋರ್ಟ್ ಆದೇಶವನ್ನು ಪ್ರಶ್ನಿಸಲಾಗದು: ದರ್ಶನ ವಿಚಾರವಾಗಿ ಡಿಕೆಶಿ ಪ್ರತಿಕ್ರಿಯೆ*

ಪ್ರಗತಿವಾಹಿನಿ ಸುದ್ದಿ: ನ್ಯಾಯಾಲಯದ ತೀರ್ಪನ್ನು ಸರ್ಕಾರ ಸ್ವಾಗತಿಸುತ್ತದೆ. ಕೋರ್ಟಿನ ಆದೇಶವನ್ನು ಪ್ರಶ್ನಿಸಲಾಗದು ಎಂದು ನಟ ದರ್ಶನಗೆ ಮದ್ಯಂತರ ಜಾಮಿನು ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.‌

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲು ಸೇರಿದ್ದ 2ನೇ ಆರೋಪಿ ಹಾಗೂ ನಟ ದರ್ಶನ್‌ಗೆ ಕರ್ನಾಟಕ ಹೈಕೋರ್ಟ್ ಇಂದು ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

Home add -Advt

ಕೆಲ ತಿಂಗಳ ಹಿಂದೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಕರ್ ಅವರು ಡಿಕೆಶಿ ಅವರ ನಿವಾಸಕ್ಕೆ ಭೇಟಿ ಮಾಡಿದ್ದರು. ಆದರೆ ದರ್ಶನ್ ವಿಚಾರವಾಗಿ ಚರ್ಚೆ ಆಗಿಲ್ಲ ಎಂದು ಡಿಕೆಶಿ ಪ್ರತಿಕ್ರಿಯೆ ನೀಡಿದ್ದರು. ಕೆಲ ದಿನಗಳ ಹಿಂದೆ ಡಿಕೆಶಿ ಅವರು ಚನ್ನಪಟ್ಟಣದಲ್ಲಿ ಕಾರ್ಯಕ್ರಮದ ವೇದಿಕೆಯೊಂದರಲ್ಲಿ ಭಾಗವಹಿಸಿದ್ದಾಗ ಡಿ ಬಾಸ್.. ಡಿ..ಬಾಸ್‌ಗೆ ರಿಲೀಸ್ ಮಾಡಿಸಿ ಎಂದು ದರ್ಶನ್ ಅಭಿಮಾನಿಗಳು ಘೋಷಣೆ ಹಾಕಿದ್ದೂ ವರದಿಯಾಗಿತ್ತು.

Related Articles

Back to top button