ಪ್ರಗತಿವಾಹಿನಿ ಸುದ್ದಿ, ಖಾನಾಪುರ –ತಾಲೂಕಿನ ಬೇಕ್ವಾಡದಲ್ಲಿ ನಿನ್ನೆ ವಿದ್ಯಾರ್ಥಿಗಳ ಮೇಲೆ ಬಸ್ ಹತ್ತಿಸಲೆತ್ನಿಸದ ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದೆ. ಇಂದು ಬೆಳಗ್ಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಾಲಕನನ್ನು ಅಮಾನತುಗೊಳಿಸಿತ್ತು.
ವಿದ್ಯಾರ್ಥಿಗಳು ಬೆಳಗ್ಗೆಯಿಂದಲೇ ಬೇಕ್ವಾಡ ಕ್ರಾಸ್ ನಲ್ಲಿ ಸಾರ್ವಜನಿಕರೊಂದಿಗೆ ಬೃಹತ್ ಪ್ರತಿಭಟನೆಯನ್ನೂ ನಡೆಸಿದ್ದಾರೆ. ಪೊಲೀಸರು ಪ್ರಕರಣ ಕುರಿತು ತನಿಖೆಗೆ ಆದೇಶಿಸಿದ್ದಾರೆ.
ಈ ಮಧ್ಯೆ, ಮಹತ್ವದ ಬೆಳವಣಿಗೆಯಲ್ಲಿ ಘಟನೆ ಕುರಿತು ಖಾನಾಪುರ ನ್ಯಾಯಾಲಯ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಅಲ್ಲದೆ, ಬಸ್ ಚಾಲಕನನ್ನು 24 ಗಂಟೆಯೊಳಗೆ ಬಂಧಿಸುವಂತೆ ನ್ಯಾಯಮೂರ್ತಿ ಮಲ್ಲಿಕಾರ್ಜುನ ಮಡಿವಾಳ ಆದೇಶಿಸಿದ್ದಾರೆ.
ಇಂದು ಬೆಳಗ್ಗೆ ಬೇಕ್ವಾಡ ಕ್ರಾಸ್ ನಲ್ಲಿ ಭಾರಿ ಪ್ರತಿಭಟನೆ ನಡೆದು, ರಸ್ತೆ ತಡೆ ನಡೆಸಲಾಗಿದೆ. ಬಸ್ ಚಾಲಕನ ಮೇಲೆ ಕ್ರಮವಾಗಬೇಕು. ಜೊತೆಗೆ ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ಬಸ್ ವ್ಯವಸ್ಥ ಮಾಡಬೇಕೆಂದು ಆಗ್ರಹಿಸಲಾಯಿತು.
ಬಸ್ ಚಾಲಕರು ಮನಸೋ ಇಚ್ಛೆ ವರ್ತಿಸುತ್ತಿದ್ದಾರೆ. ಸ್ವಂತ ಬಸ್ಸಿನಂತೆ ಪ್ರಯಾಣಿಕರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಇದು ನಿಲ್ಲಬೇಕು ಎಂದು ಆಗ್ರಹಿಸಲಾಯಿತು. ಅನೇಕ ಬಸ್ ಚಾಲಕರು ಟೆಂಪೋ ಚಾಲಕರೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಪ್ರಮಾಣಿಕರನ್ನು ಹತ್ತಿಸಿಕೊಳ್ಳದೆ ಹೋಗುತ್ತಾರೆ ಎಂದೂ ದೂರಲಾಯಿತು.
ಸಂಬಂಧಿಸಿದ ಸುದ್ದಿ ಓದಿ –
ವಿದ್ಯಾರ್ಥಿಗಳ ಮೇಲೆ ಬಸ್ ಹತ್ತಿಸಲು ಯತ್ನಿಸಿದ್ದ ಬಸ್ ಚಾಲಕ ಅಮಾನತು -ವಿದ್ಯಾರ್ಥಿಗಳಿಂದ ರಸ್ತೆ ತಡೆ -Updated News
ಹಳಿಯಾಳ ಬಸ್ ಚಾಲಕ ಬುಧವಾರ ಸಸ್ಪೆಂಡ್ ಸಾಧ್ಯತೆ – ಮೈ ನವಿರೇಳಿಸುವ ವೀಡಿಯೋ ನೋಡಿ
ವಿದ್ಯಾರ್ಥಿಗಳ ಪ್ರತಿಭಟನೆಯ ವೀಡಿಯೋ ನೋಡಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ