Latest

ಇಂದೇ ಸ್ಪೀಕರ್ ಮುಂದೆ ಹಾಜರಾಗಿ: ಅತೃಪ್ತರಿಗೆ ಕೊರ್ಟ್ ಸೂಚನೆ

ಪ್ರಗತಿವಾಹಿನಿ ಸುದ್ದಿ, ನವದೆಹಲಿ: 

ಇಂದೇ ಸ್ಪೀಕರ್ ಎದುರು ಹಾಜರಾಗುವಂತೆ ಸರ್ವೋಚ್ಛ ನ್ಯಾಯಾಲಯ ಎಲ್ಲ ಅತೃಪ್ತ ಶಾಸಕರಿಗೆ ಸೂಚನೆ ನೀಡಿದೆ.

ಜೊತೆಗೆ ಶಾಸಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಆದೇಶಿಸಲಾಗಿದೆ.

ಸ್ಪೀಕರ್ ರಮೇಶ ಕುಮಾರ ತಮ್ಮ ರಾಜಿನಾಮೆ ನೀಡಲು ವಿಳಂಬ ಮಾಡುತ್ತಿರುವ ಹಿನ್ನೆಲೆಯಲ್ಲಿ ಅತೃಪ್ತ ಸಾಸಕರು ಸುಪ್ರಿಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಕುರಿತು ವಿಚಾರಣೆ ಕೈಗೆತ್ತಿಕೊಂಡ ಕೋರ್ಟ್, ಇಂದೇ ಸಂಜೆ 6 ಗಂಟೆಯೊಳಗೆ ಸ್ಪೀಕರ್ ಮುಂದೆ ಹಾಜರಾಗುವಂತೆ ಸೂಚಿಸಿ, ನಾಳೆಗ ವಿಚಾರಣೆ ಮುಂದೂಡಿದೆ.

ಇದರಿಂದಾಗಿ ರಾಜ್ಯ ರಾಜಕೀಯ ಮತ್ತಷ್ಟು ಕುತೂಹಲ ಮೂಡಿಸಿದೆ.

 

 

Related Articles

Back to top button