Kannada NewsKarnataka News

ಕೋವಿಡ್-19: 11 ಜನರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – : ಕೋವಿಡ್-೧೯ ಸೋಂಕು ತಗುಲಿದ್ದ ಒಬ್ಬ ಮಹಿಳೆಯು ಸೇರಿದಂತೆ ಹನ್ನೊಂದು ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಬಿಮ್ಸ್ ನಿರ್ದೇಶಕ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ಬೆಳಗಾವಿ ನಗರ ಕ್ಯಾಂಪ್ ಪ್ರದೇಶದ 4 ಜನರು; ರಾಯಬಾಗ ತಾಲ್ಲೂಕು ಕುಡಚಿಯ 4 ಜನರು ಮತ್ತು ಸಂಕೇಶ್ವರ, ಯಳ್ಳೂರ ಹಾಗೂ ಹಿರೇಬಾಗೇವಾಡಿಯ ತಲಾ ಒಬ್ಬರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ.
ಬಿಡುಗಡೆ ಹೊಂದಿದವರ ವಿವರ:
ಕ್ಯಾಂಪ್ ಪ್ರದೇಶ –
 ಪಿ-355
ಪಿ-356
ಪಿ-358
ಪಿ-359
ಕುಡಚಿ-
ಪಿ-296
ಪಿ-297
ಪಿ-299
ಪಿ-301
ಸಂಕೇಶ್ವರ- ಪಿ-293; ಯಳ್ಳೂರ ಪಿ-295 ಹಾಗೂ ಹಿರೇಬಾಗೇವಾಡಿ ಪಿ-193.
ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 73 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದೀಗ ಒಟ್ಟಾರೆ 26 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಬ್ಬರು ಮೃತಪಟ್ಟಿರುತ್ತಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button