ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -: ಕೋವಿಡ್-19 ಸೋಂಕು ತಗುಲಿದ್ದ 14 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಗಲಕೋಟೆ ಜಿಲ್ಲೆ ಹಾಗೂ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಸಂಕೇಶ್ವರ, ರಾಯಬಾಗ ತಾಲ್ಲೂಕಿನ 14 ಜನರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ