Kannada NewsKarnataka News

ಕೋವಿಡ್-19: 8 ಜನರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -: ಕೋವಿಡ್-೧೯ ಸೋಂಕು ತಗುಲಿದ್ದ  ಒಬ್ಬ ಮಹಿಳೆಯು ಸೇರಿದಂತೆ ಒಟ್ಟು ಎಂಟು ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ರಾಯಬಾಗ ತಾಲ್ಲೂಕು ಕುಡಚಿಯ 5 ಜನರು ಮತ್ತು ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ಮೂವರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ
ಬಿಡುಗಡೆ ಹೊಂದಿದವರ ವಿವರ:
 ಪಿ-224
ಪಿ-225
ಪಿ-243
ಪಿ-244
ಪಿ-245
ಪಿ-289
ಪಿ-294
ಪಿ-298
ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 73 ಜನರಲ್ಲಿ ಸೋಂಕು ಪತ್ತೆಯಾಗಿರುತ್ತದೆ. ಇದೀಗ ಒಟ್ಟಾರೆ 34 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಬ್ಬರು ಮೃತಪಟ್ಟಿರುತ್ತಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button