ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ತನ್ನ ಅಟ್ಟಹಾಸವನ್ನು ಮುಂದಿವರಿಸಿದ್ದು, ಕಳೆದ 24 ಗಂಟೆಗಳಲ್ಲಿ 4,213 ಕೊರೊನಾ ಪ್ರಕರಣಗಳು ದಾಖಲಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 67,152ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ 24 ಗಂಟೆಗಳಲ್ಲಿ 97 ಜನ ಕೊರೊನಾಗೆ ಬಲಿಯಾಗಿದ್ದು, ಈ ಮೂಲಕ ಇಡೀ ದೇಶದಲ್ಲಿ ಕೊರೊನಾ ಸಾವಿನ ಸಂಖ್ಯೆ 2,206ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
67,152 ಕೊರೊನಾ ಸೋಂಕಿತರ ಪೈಕಿ 20,917 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ದೇಶದಲ್ಲಿ 44,029 ಮಂದಿ ಕೊರೊನಾ ಸೋಂಕಿನಿಂದ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ