ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಸೊಂಕು ಹೆಚ್ಚುತ್ತಿದ್ದು, ಈ ವರೆಗೆ 590 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ನಡುವೆ ರಾಷ್ಟ್ರಪತಿ ಭವನಕ್ಕೂ ಕೊರೊನಾ ಭೀತಿ ಎದುರಾಗಿದ್ದು, ರಾಷ್ಟ್ರಪತಿ ಭವನದ ಓರ್ವ ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಕಟ್ಟುನಿಟ್ಟಾಗಿ ಲಾಕ್ಡೌನ್ ಜಾರಿ ಮಾಡಿದರೂ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬಂದಿಲ್ಲ. ರಾಷ್ಟ್ರಪತಿ ಭವನದ ಕೆಲಸ ಮಾಡುವ ಓರ್ವ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ 125 ಕುಟುಂಬಗಳನ್ನು ಹೋಮ್ ಕ್ವಾರಂಟೈನ್ನಲ್ಲಿರಲು ಸೂಚಿಸಲಾಗಿದೆ.
ರಾಷ್ಟ್ರಪತಿ ಭವನದ ಸ್ವಚ್ಛತಾ ಕೆಲಸ ಮಾಡುತ್ತಿದ್ದ ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿದೆ. ಹೀಗಾಗಿ, ಕೇಂದ್ರ ಗೃಹ ಸಚಿವಾಲಯದ ಮಾರ್ಗಸೂಚಿಯಂತೆ ಮುನ್ನೆಚ್ಚರಿಕಾ ಕ್ರಮವಾಗಿ ಆ ಸಿಬ್ಬಂದಿಯ ಜೊತೆ ಸಂಪರ್ಕ ಹೊಂದಿದ್ದ 125 ಕುಟುಂಬಗಳಿಗೆ ಹೋಂ ಕ್ವಾರಂಟೈನ್ ವಿಧಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ