Belagavi NewsBelgaum NewsKannada NewsKarnataka NewsSports

*ಬಿಮ್ಸ್ ವೈದ್ಯಕೀಯ ವಿದ್ಯಾರ್ಥಿಯ ಸಾಧನೆ: ನಡಿಗೆಯಲ್ಲಿ ದ್ವಿತೀಯ ಸ್ಥಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿದ್ದ 23ನೇ ವಾರ್ಷಿಕ ಕ್ರೀಡಾಕೂಟದಲ್ಲಿ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ(ಬಿಮ್ಸ್)ಯ ವೈದ್ಯಕೀಯ ವಿದ್ಯಾರ್ಥಿ ಆತ್ಮಾನಂದ ಚಂದರಗಿ 20,000 ಮೀ.ವೇಗದ ನಡಿಗೆ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಬಿಮ್ಸ್ ನಿರ್ದೇಶಕ ಅಶೋಕ ಕುಮಾರ್ ಶೆಟ್ಟಿ, ಮುಖ್ಯ ಆಡಳಿತ ಅಧಿಕಾರಿ ಡಾ. ಸಿದ್ದು ಹುಲ್ಲೋಳಿ, ವೈದ್ಯಕೀಯ ಅಧೀಕ್ಷಕ ಡಾ. ಈರಣ್ಣ ಪಲ್ಲೆದ, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ. ಸ್ಪರ್ಧೆಯಲ್ಲಿ ಬಿಮ್ಸ್ ನಿಂದ ಒಟ್ಟು 24 ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related Articles

Back to top button