ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ರಾಜ್ಯದಲ್ಲಿ ಕೊರೊನಾ ಮೂರನೆ ಅಲೆ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಟ್ಟೆಚ್ಚರಕ್ಕೆ ಮುಂದಾಗಿದ್ದು, ದೆಹಲಿಯಿಂದ ವಾಪಸ್ ಆಗಿರುವ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಜಿಲ್ಲಾಡಳಿತಗಳ ಜೊತೆ ಸಭೆ ನಡೆಸಿದ್ದು, ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಿದ್ದಾರೆ.
ಗೃಹ ಕಚೇರಿ ಕುಷ್ಣಾದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರು ಸೇರಿದಂತೆ 8 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಆರೋಗ್ಯಾಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಸಭೆ ನಡೆಸಿರುವ ಸಿಎಂ ಬೊಮ್ಮಾಯಿ, ಕೋವಿಡ್ ಮೂರನೇ ಅಲೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಕೇಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಮತ್ತೆ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಜಾರಿಗೊಳಿಸುವ ಬಗ್ಗೆಯೂ ಸಭೆಯಲ್ಲಿ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಒಂದೇ ಅಪಾರ್ಟ್ ಮೆಂಟ್ ನ 72 ಮನೆ ಸೀಲ್ ಡೌನ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ