Latest

ದಸರಾ, ದೀಪಾವಳಿಗೆ ರಾಜ್ಯದಲ್ಲಿ ಕೋವಿಡ್ ಟಫ್ ರೂಲ್ಸ್…!

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿವೆ ಆದರೆ ಕೇಂದ್ರ ಸರ್ಕಾರ ಇದೀಗ ಕೊರೊನಾ ಮೂರನೇ ಅಲೆ ಎಚ್ಚರಿಕೆಯನ್ನು ನೀಡಿದೆ.

ಮುಂದಿನ ತಿಂಗಳು ಸಾಲು ಸಾಲು ಹಬ್ಬಗಳು ಬರುತ್ತಿರುವುದರಿಂದ ಸೋಂಕಿನ ಭೀತಿ ಹೆಚ್ಚಿದ್ದು, ಹಬ್ಬಗಳಿಗೆ ಕಠಿಣ ನಿಯಮಗಳನ್ನು ವಿಧಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಈ ಹಿಂದೆ ಹಬ್ಬಗಳ ಬಳಿಕ ಕೊರೊನಾ ಪ್ರಕರಣಗಳು ಹೆಚ್ಚಿದ ಉದಾಹರಣೆಗಳಿವೆ ಈ ನಿಟ್ಟಿನಲ್ಲಿ ಅಕ್ಟೋಬರ್ ಅಂತ್ಯದವರೆಗೂ ಎಚ್ಚರಿಕೆಯಿಂದಿರುವುದು ಅಗತ್ಯ. ವ್ಯಾಕ್ಸಿನೇಷನ್. ಟೆಸ್ಟಿಂಗ್ ಹೆಚ್ಚಿಸುವಂತೆ ಹಾಗೂ ಗುಂಪುಗೂಡುವುದನ್ನು ತಡೆಯುವಂತೆ ಸಲಹೆ ನೀಡಿದೆ.

ಸೋಂಕಿತರ ಸಂಖ್ಯೆ ಹೆಚ್ಚಿರುವ ಪ್ರದೇಶಗಳಲ್ಲಿ ಕಂಟೈನ್ಮೆಂಟ್ ಝೋನ್ ಜಾರಿಗೆ ಸೂಚನೆ ನೀಡಿದೆ. ಒಟ್ಟಾರೆ ಕೇಂದ್ರ ಸರ್ಕಾರ ಮೂರನೆ ಅಲೆ ಬಗ್ಗೆ ರಾಜ್ಯಕ್ಕೆ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ದಸರಾ, ದೀಪಾವಳಿ ಹಬ್ಬಗಳಿಗೆ ಕಠಿಣ ಕೋವಿಡ್ ನಿಯಮ ಜಾರಿಗೆ ಬರುವ ಸಾಧ್ಯತೆ ದಟವಾಗಿದೆ.

Home add -Advt

Related Articles

Back to top button