Latest

3ನೇ ಅಲೆ ಬಿಂಬಿತವಾಗಿದೆ; ಮಿನಿ ಲಾಕ್ ಡೌನ್ ಸುಳಿವು ಕೊಟ್ಟ ಸಿಎಂ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರೂಪಾಂತರಿ ವೈರಸ್ ಒಮಿಕ್ರಾನ್ ಹಾಗೂ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಕೋವಿಡ್ ತಡೆಗಟ್ಟಲು ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತರಬೇಕಾದ ಅನಿವಾರ್ಯತೆ ಇದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 15-18 ವರ್ಷದ ಮಕ್ಕಳ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಬೊಮ್ಮಾಯಿ, ಕೊರೊನಾ ಮೂರನೇ ಅಲೆ ಬಿಂಬಿತವಾಗಿದೆ. ಇದು ನಿರ್ಲಕ್ಷ ಮಾಡುವ ಸಂದರ್ಭವಲ್ಲ. ಎರಡನೇ ಅಲೆಯ ವೇಳೆ ಆದಂತಹ ಪರಿಸ್ಥಿತಿ ಮರುಕಳಿಸಬಾರದು. ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸಜ್ಜಾಗಿದ್ದು, ಕಠಿಣ ಕ್ರಮಗಳನ್ನು ಜಾರಿಗೊಳಿಸುತ್ತಿದೆ ಎಂದರು.

ಆರ್ಥಿಕತೆಗೆ ಹೊಡೆತ ಬೀಳದಂತೆ ರಾಜ್ಯದಲ್ಲಿ ಕಠಿಣ ನಿಯಮಗಳನ್ನು ಜಾರಿಗೆ ತರಲಾಗುತ್ತಿದೆ. ಜನರ ಜೀವ ಮುಖ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕು. ಗಡಿ ಭದ್ರತೆಕೈಗೊಳ್ಳಲಾಗುವುದು. ಟ್ರ್ಯಾಕಿಂಗ್ ವ್ಯವಸ್ಥೆ ಹೆಚ್ಚಿಸುತ್ತೇವೆ. ಮಾಸ್ಕ್, ದೈಹಿಕ, ಸಾಮಾಜಿಕ ಅಂತರ ಪಾಲನೆ ಕಡ್ಡಾಯ. ಜನರು ಅನಗತ್ಯ ಓಡಾಟ ನಡೆಸುವುದನ್ನು ನಿಲ್ಲಿಸಬೇಕು. ಲಸಿಕೆ ಬಗ್ಗೆ ನಿರ್ಲಕ್ಷ ಮಾಡುವಂತಿಲ್ಲ. ಆಸ್ಪತ್ರೆಗಳಲ್ಲಿಯೂ ಆಕ್ಸಿಜನ್ ಬೆಡ್ ಸೇರಿದಂತೆ ಎಲ್ಲಾರೀತಿಯ ಉಪಕರಣಗಳ ಬಗ್ಗೆಯೂ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ರಾಜ್ಯದಲ್ಲಿ ಮತ್ತೆ 10 ಒಮಿಕ್ರಾನ್ ಕೇಸ್ ಪತ್ತೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button