EducationKarnataka News

*ಶಾಲೆಗಳಿಗೆ ಕೋವಿಡ್ ಗೈಡ್ ಲೈನ್ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಶಾಲೆಗಳು ಆರಂಭವಾಗಿವೆ. ಒಂದೆಡೆ ಮಳೆಯ ಅಬ್ಬರ, ಮತ್ತೊಂದೆಡೆ ಮಹಾಮಾರಿ ಕೊರೊನಾ ಸೋಂಕು ಹೆಚ್ಚಳದ ನಡುವೆ ಶಾಲೆಗಳು ಪುನರಾಂಭವಾಗಿವೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಆರೋಗ್ಯ ಇಲಾಖೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಕೋವಿಡ್ ಗೈಡ್ ಲೈನ್ ನೀಡಿದೆ.

ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಶಾಲೆಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿ ಆದೇಶ ಹೊರಡಿಸಿದ್ದಾರೆ.

ಮಕ್ಕಳಲ್ಲಿ ಜ್ವರ, ಕೆಮ್ಮು ನೆಗಡಿ ಲಕ್ಷಣಗಳು ಕಂಡುಬಂದಲ್ಲಿ ಶಾಲೆಗೆ ಕಳುಹಿಸಬಾರದು
ಸಂಪೂರ್ಣ ಗುಣಮುಖರಾದ ಬಳಿಕ ಶಾಲೆಗೆ ಕಳುಹಿಸಬೇಕು
ಕೆಮ್ಮು, ನೆಗಡಿ, ಜ್ವರದಂತಹ ಗುಣಲಕ್ಷಣಗಳಿರುವ ಮಕ್ಕಳು ಶಾಲೆಗೆ ಬಂದರೆ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಿ
ಶಾಲಾ ಸಿಬ್ಬಂದಿಗಳಲ್ಲಿ ಗುಣಲಕ್ಷಣಗಳು ಕಂಡುಬಂದಲ್ಲಿ ಮುಂಜಾಗೃತಾ ಕ್ರಮ ಪಾಲಿಸಬೇಕು
ಶಾಲೆಗಳಲ್ಲಿ ಸ್ವಚ್ಛತೆ ಹಾಗೂ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button