ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮಿತಿಮೀರುತ್ತಿದೆ. ಹಾಗಾಗಿ ಕೋವಿಡ್ ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿಗೆ ತರುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗುತ್ತಿದೆ. ಏಪ್ರಿಲ್ 20ರಂದು ಟಫ್ ರೂಲ್ಸ್ ಜಾರಿ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದರು.
ಕೋವಿಡ್ ಸಲಹಾ ಸಮಿತಿ ತಜ್ಞರ ಜೊತೆ ತುರ್ತು ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈಗ ಜಾರಿಯಲ್ಲಿರುವ 8 ನಗರಗಳ ನೈಟ್ ಕರ್ಫ್ಯೂ ಏಪ್ರಿಲ್ 20ರವರೆಗೂ ಮುಂದುವರೆಯಲಿದೆ. 20ರಂದು ಮತ್ತೊಮ್ಮೆ ಸಭೆ ನಡೆಸಿ ಮುಂದೆ ಕೈಗೊಳ್ಳಬೇಕಾದ ನಿಯಮಗಳ ಬಗ್ಗೆ ನಿರ್ಧರಿಸಲಾಗುವುದು ಎಂದರು.
ದೆಹಲಿ, ಮಹಾರಾಷ್ಟ್ರದಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ, ಲಾಕ್ ಡೌನ್ ಜಾರಿ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ, ಕರ್ನಾಟಕವನ್ನು ಬೇರೆ ರಾಜ್ಯಗಳಿಗೆ ಹೋಲಿಸುವುದು ಬೇಡ. ನಮ್ಮ ರಾಜ್ಯದಲ್ಲಿನ ಸ್ಥಿತಿಗತಿ ಬೇರೆ ರಾಜ್ಯಗಳಿಗಿಂತ ವಿಭಿನ್ನವಾಗಿದೆ. ಇಲ್ಲಿನ ಪರಿಸ್ಥಿತಿ ನೋಡಿಕೊಂಡು ಕ್ರಮಕೈಗೊಳ್ಳಬೇಕಾಗುತ್ತದೆ ಎಂದರು.
ಕೊರೊನಾ ಅಟ್ಟಹಾಸ; ಒಂದೇ ದಿನದಲ್ಲಿ ದಾಖಲೆಯ 2.17ಲಕ್ಷ ಜನರಲ್ಲಿ ಸೋಂಕು ದೃಢ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ