Latest

*ಒಂದೇ ದಿನದಲ್ಲಿ ಮತ್ತೆ 1300 ಜನರಲ್ಲಿ ಕೊರೊನಾ ಸೋಂಕು ಪತ್ತೆ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೆಲ ದಿನಗಳಿಂದ ಕೊರೊನ ಅಸೊಂಕಿತರ ಸಂಖ್ಯೆ ಮತ್ತೆ ಗಣನೀಯವಾಗಿ ಹರಡುತ್ತಿದ್ದು, ಕಳೆದ ಮೂರ್ನಾಲ್ಕು ದಿನಗಳಿಂದ ಪ್ರತಿ ದಿನ ಸಾವಿಕ್ಕೂ ಅಧಿಕ ಜನರಲ್ಲಿ ಸೋಂಕು ಪತ್ತೆಯಾಗುತ್ತಿದೆ.

ನಿನ್ನೆಯಷ್ಟೇ 1134 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿತ್ತು. ಇದೀಗ ಕಳೆದ 24 ಗಂಟೆಯಲ್ಲಿ ಮತ್ತೆ 1,300 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ದೇಶದಲ್ಲಿ 7605 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 530816 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಈವರೆಗೆ 44160997 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ಈವರೆಗೆ 220,65,28,710 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 89,078 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button