Latest

ಧಾರವಾಡ ಕಾಲೇಜಿನಲ್ಲಿ ಕೊರೊನಾ ಅಟ್ಟಹಾಸ; ಬೆಂಗಳೂರಿನ ಖಾಸಗಿ ಶಾಲೆಯಲ್ಲಿಯೂ ಹಲವು ಮಕ್ಕಳಿಗೆ ಸೋಂಕು; ಮತ್ತೆ 3ನೇ ಅಲೆಯ ಆತಂಕ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಧಾರವಾಡದ ಎಸ್ ಡಿಎಂ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಇದೀಗ ಎಸ್ ಡಿಎಂ ಕಾಲೇಜಿನ ಮತ್ತೆ 116 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಎಸ್ ಡಿಎಂ ಕಾಲೇಜಿನ 66 ವಿದ್ಯಾರ್ಥಿಗಳಿಗೆ ನಿನ್ನೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ 690 ಜನರಿಗೆ ಆರ್‌ಟಿಪಿಸಿಆರ್ ಟೆಸ್ಟ್ ಮಾಡಲಾಗಿತ್ತು. ಈ ಪೈಕಿ ಇದೀಗ  ಮತ್ತೆ 116 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಎಸ್ ಡಿ ಎಂ ಕಾಲೇಜಿನಲ್ಲಿ 182 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಸದ್ಯ ಜಿಲ್ಲಾಡಳಿತ ಹಾಸ್ಟೆಲ್‌ ಸೀಲ್‌ಡೌನ್ ಮಾಡಿದೆ.

Home add -Advt

ಇನ್ನೊಂದೆಡೆ ಬೆಂಗಳೂರಿನ ಖಾಸಗಿ ಶಾಲೆಯಲ್ಲಿ 37 ಜನರಿಗೆ ಕೊರೊನಾ ಸೋಂಕು ತಗುಲಿದೆ. ಸರ್ಜಾಪುರ ರಸ್ತೆಯಲ್ಲಿನ ಖಾಸಗಿ ಶಾಲೆಯ 33 ವಿದ್ಯಾರ್ಥಿಗಳು ಹಾಗೂ ನಾಲ್ವರು ಶಾಲಾ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಒಟ್ಟಾರೆ ರಾಜ್ಯದಲ್ಲಿ ಮಳೆ ಅಬ್ಬರದ ನಡುವೆ ಮತ್ತೆ ಕೋವಿಡ್ ಭೀತಿ ಎದುರಾಗಿದೆ.

ಅಮ್ಮನಿಗೆ ಮೆಸೇಜ್ ಕಳುಹಿಸಿ ಕೆರೆಗೆ ಹಾರಿದ ವಿದ್ಯಾರ್ಥಿ

ಪ್ರೊ.ಕೆ.ಎಸ್.ನಾರಾಯಣಾಚಾರ್ಯ ಇನ್ನಿಲ್ಲ

 

Related Articles

Back to top button