ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,134 ಹೊಸ ಕೊರೊನಾವೈರಸ್ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 7,026 ಕ್ಕೆ ಏರಿದೆ ಎಂದು ಆರೋಗ್ಯ ಸಚಿವಾಲಯದ ಅಧಿಕೃತ ವೆಬ್‌ಸೈಟ್ ತಿಳಿಸಿದೆ.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ನರೇಂದ್ರ ಮೋದಿ ಕರೋನವೈರಸ್ ವಿರುದ್ಧ ಅಗತ್ಯ ಮುನ್ನೆಚ್ಚರಿಕೆಗಳನ್ನು ಮತ್ತು ಜಾಗರೂಕತೆಯನ್ನು ಕಾಪಾಡಿಕೊಳ್ಳಲು ಎಲ್ಲರಿಗೂ ಸಲಹೆ ನೀಡಿದರು.
ಭಾರತದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಮಧ್ಯೆ, ಲ್ಯಾಬ್ ಗಳು ಕಣ್ಗಾವಲಿರಿಸಿವೆ. ತೀವ್ರವಾದ ಉಸಿರಾಟದ ಕಾಯಿಲೆ (SARI) ಪ್ರಕರಣಗಳ ಪರೀಕ್ಷೆ ಮತ್ತು ಜೀನೋಮ್ ಅನುಕ್ರಮವನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಬುಧವಾರ ಕರೆ ನೀಡಿದ್ದಾರೆ ಎಂದು PTI ವರದಿ ಮಾಡಿದೆ.
ವರದಿಯ ಪ್ರಕಾರ, ಕೋವಿಡ್-ಸೂಕ್ತ ನಡವಳಿಕೆಯನ್ನು ಅನುಸರಿಸುವ ಮತ್ತು ಉಸಿರಾಟದ ನೈರ್ಮಲ್ಯವನ್ನು ಕಾಪಾಡಿಕೊಳ್ಳುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ಭಾರತದಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ಮಧ್ಯೆ ಸಾರ್ವಜನಿಕ ಆರೋಗ್ಯ ಕಾಪಾಡಲು ಕೈಗೊಂಡ ಸಿದ್ದತೆಗಳನ್ನು ಪರಿಶೀಲಿಸಲು ನಡೆಸಿದ ಉನ್ನತ ಮಟ್ಟದ ಸಭೆಯಲ್ಲಿ ಪ್ರಧಾನ ಮಂತ್ರಿ ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ