Latest

*24 ಗಂಟೆಗಳಲ್ಲಿ 1,134 ಹೊಸ ಕೊರೊನಾ ವೈರಸ್ ಪ್ರಕರಣಗಳು*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,134 ಹೊಸ ಕೊರೊನಾವೈರಸ್ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 7,026 ಕ್ಕೆ ಏರಿದೆ ಎಂದು ಆರೋಗ್ಯ ಸಚಿವಾಲಯದ ಅಧಿಕೃತ ವೆಬ್‌ಸೈಟ್ ತಿಳಿಸಿದೆ.

Home add -Advt

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ನರೇಂದ್ರ ಮೋದಿ ಕರೋನವೈರಸ್ ವಿರುದ್ಧ ಅಗತ್ಯ ಮುನ್ನೆಚ್ಚರಿಕೆಗಳನ್ನು ಮತ್ತು ಜಾಗರೂಕತೆಯನ್ನು ಕಾಪಾಡಿಕೊಳ್ಳಲು ಎಲ್ಲರಿಗೂ ಸಲಹೆ ನೀಡಿದರು.

ಭಾರತದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಮಧ್ಯೆ, ಲ್ಯಾಬ್ ಗಳು ಕಣ್ಗಾವಲಿರಿಸಿವೆ. ತೀವ್ರವಾದ ಉಸಿರಾಟದ ಕಾಯಿಲೆ (SARI) ಪ್ರಕರಣಗಳ ಪರೀಕ್ಷೆ ಮತ್ತು ಜೀನೋಮ್ ಅನುಕ್ರಮವನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಬುಧವಾರ ಕರೆ ನೀಡಿದ್ದಾರೆ ಎಂದು PTI  ವರದಿ ಮಾಡಿದೆ.

ವರದಿಯ ಪ್ರಕಾರ, ಕೋವಿಡ್-ಸೂಕ್ತ ನಡವಳಿಕೆಯನ್ನು ಅನುಸರಿಸುವ ಮತ್ತು ಉಸಿರಾಟದ ನೈರ್ಮಲ್ಯವನ್ನು ಕಾಪಾಡಿಕೊಳ್ಳುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ಭಾರತದಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ಮಧ್ಯೆ ಸಾರ್ವಜನಿಕ ಆರೋಗ್ಯ ಕಾಪಾಡಲು ಕೈಗೊಂಡ ಸಿದ್ದತೆಗಳನ್ನು ಪರಿಶೀಲಿಸಲು ನಡೆಸಿದ ಉನ್ನತ ಮಟ್ಟದ ಸಭೆಯಲ್ಲಿ ಪ್ರಧಾನ ಮಂತ್ರಿ ಹೇಳಿದರು.

Related Articles

Back to top button