ರಾಜ್ಯದಲ್ಲಿ ಮತ್ತೆ ಹೆಚ್ಚುತ್ತಿದ್ದೆ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಶ್ವದಾದ್ಯಂತ ಅಟ್ಟಹಾಸ ಮೆರೆದಿದ್ದ ಕೊರೊನಾ ಸೋಂಕು ಮತ್ತೆ ಉಲ್ಬಣಗೊಳ್ಳುತ್ತಿದೆ. ದೇಶದಲ್ಲಿ ಮಾತ್ರವಲ್ಲ ಕರ್ನಾಟಕದಲ್ಲಿಯೂ ಕಳೆದ ಒಂದು ವಾರದಿಂದ ಕೋವಿಡ್ ಪ್ರಕರಣ ಹೆಚ್ಚುತ್ತಿದೆ.

ಬದಲಾದ ವಾತಾವರಣದಿಂದಾಗಿ ರಾಜ್ಯದಲ್ಲಿ ನೆಗಡಿ, ಕೆಮ್ಮು, ಜ್ವರ, ಅನಾರೋಗ್ಯ ಸಮಸ್ಯೆ ಹೆಚ್ಚುತ್ತಿದ್ದು ಜನರು ಮತ್ತೆ ಸಂಕಷ್ಟಕ್ಕೀಡಾಗಿದ್ದಾರೆ. ನಿನ್ನೆ ದೇಶದಲ್ಲಿ 300 ಜನರಲ್ಲಿ ಸೋಂಕು ದೃಢಪಟ್ಟಿತ್ತು. ರಾಜ್ಯದಲ್ಲಿ 95 ಪ್ರಕರಣ ಹಾಗೂ ಬೆಂಗಳೂರಿನಲ್ಲಿಯೇ ಅತಿ ಹೆಚ್ಚು 79 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

100 ದಿನಗಳ ಬಳಿಕ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ರಾಜ್ಯದಲ್ಲಿ 391 ಸಕ್ರಿಯ ಪ್ರಕರಣ ದಾಖಲಾಗಿದೆ. ಒಂದು ವಾರದಲ್ಲಿ ಕೋವಿಡ್ ಖಚಿತ ಶೇಕಡಾವಾರು ಕೇಸ್ 2.44ಕ್ಕೆ ಏರಿಕೆಯಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button