ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಮೂರನೇ ಅಲೆ ಭೀತಿ ನಡುವೆಯೇ ರಾಜ್ಯದಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಮತ್ತೆ ಟಫ್ ರೂಲ್ಸ್ ಜಾರಿಯಾಗುವ ಸಾಧ್ಯತೆ ದಟ್ಟವಾಗಿದೆ.
ಪ್ರಮುಖವಾಗಿ 6 ಜಿಲ್ಲೆಗಳಾದ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಉಡುಪಿ, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚುತ್ತಿದ್ದು, ಶೇ.3ರಷ್ಟು ಪಾಸಿಟಿವಿಟಿ ರೇಟ್ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಈಗಗಾಲೇ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಕಠಿಣ ನಿಯಮಗಳನ್ನು ಜಾರಿಗೆ ತರುವಂತೆ ಸರ್ಕಾರಕ್ಕೆ ಸಲಹೆ ನೀಡಿದೆ.
ಈಗಾಗಲೇ ಬೆಂಗಳೂರಿನ ಅಪಾರ್ಟ್ ಮೆಂಟ್ ಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, 80 ಅಪಾರ್ಟ್ ಮೆಂಟ್ ಗಳನ್ನು ಸೀಲ್ ಡೌನ್ ಮಾಡಲಾಗಿದೆ. ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಿರುವ ಜಿಲ್ಲೆಗಳಲ್ಲಿ ನೈಟ್ ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ಮಾಡಬೇಕು ಹಾಗೂ ಸೋಂಕು ಹೆಚ್ಚುತ್ತಿರುವ ಜಿಲ್ಲೆಗಳಲ್ಲಿ ಮತ್ತೆ ಟಫ್ ರೂಲ್ಸ್ ಜಾರಿಗೆ ತರಬೇಕು ಎಂದು ಅಧಿಕಾರಿಗಳು ಸಲಹೆ ನೀಡಲಿದ್ದಾರೆ ಎನ್ನಲಾಗಿದೆ.
ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಬಿಗಿ ಕ್ರಮದ ಲಾಕ್ ಡೌನ್ ಜಾರಿಯಾಗುವ ಸಾಧ್ಯತೆ ದಟ್ಟವಾಗಿದೆ.
ರಮೇಶ ಜಾರಕಿಹೊಳಿ ನಿವಾಸದಲ್ಲಿ ಅತೃಪ್ತರ ಸಭೆ? ಮತ್ತೆ ಶುರುವಾಯ್ತಾ ಭಿನ್ನಮತೀಯ ಚಟುವಟಿಕೆ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ