Latest

ಕೋವಿಡ್ ಕೇಸ್ ಹೆಚ್ಚಳ; ಮತ್ತೆ ಲಾಕ್ ಡೌನ್ ಜಾರಿ

ಪ್ರಗತಿವಾಹಿನಿ ಸುದ್ದಿ; ಕೋಲ್ಕತ್ತಾ; ಚೀನಾ, ರಷ್ಯಾ ಸೇರಿದಂತೆ ಕೆಲ ದೇಶಗಳಲ್ಲಿ ಮತ್ತೆ ಕೋವಿಡ್ ಅಟ್ಟಹಾಸ ಆರಂಭವಾಗಿದ್ದು, ಇದರ ಬೆನ್ನಲ್ಲೇ ಭಾರತದ ಹಲವು ರಾಜ್ಯಗಳಲ್ಲಿ ಕೂಡ ಕೋವಿಡ್ ಕೇಸ್ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಮತ್ತೆ ಲಾಕ್ ಡೌನ್ ಭೀತಿ ಎದುರಾಗುತ್ತಿದೆ.

ಶಾಲಾ-ಕಾಲೇಜು ಆರಂಭವಾದ ಬೆನ್ನಲ್ಲೇ ದೇಶದ ಹಲವೆಡೆ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿದೆ. ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಸೋನಾಪುರ ಪುರಸಭೆ ವ್ಯಾಪ್ತಿಯಲ್ಲಿ ಮೂರು ದಿನಗಳ ಕಾಲ ಲಾಕ್ ಡೌನ್ ಘೋಷಿಸಲಾಗಿದೆ.

ಕೊರೊನಾ ಸೋಂಕು ವೇಗವಾಗಿ ಹರಡುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಲಾಕ್ ಡೌನ್ ಕ್ರಮ ಕೈಗೊಳ್ಳಲಾಗಿದೆ. ಸೋನಾಪುರದಿಂದ ಕೋಲ್ಕತ್ತಾ ಕೇವಲ 20 ಕಿ.ಮೀ ಅಂತರವಿದ್ದು, ಪಶ್ಚಿಮ ಬಂಗಾಳದಲ್ಲಿ ಕೋವಿಡ್ ಭೀತಿ ಎದುರಾಗಿದೆ. ನವರಾತ್ರಿ ಬಳಿಕ ಪಶ್ಚಿಮ ಬಂಗಾಳದಲ್ಲಿ ಶೇ.25ರಷ್ಟು ಕೋವಿಡ್ ಪ್ರಕರಣಗಳು ಏರಿಕೆಯಾಗಿವೆ ಎಂದು ವರದಿಗಳು ತಿಳಿಸಿವೆ.

ಕೇರಳದ ಬಳಿಕ ಕಾನ್ಪುರದ ವ್ಯಕ್ತಿಯಲ್ಲಿ ಝೀಕಾ ವೈರಸ್ ಪತ್ತೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button