ವಿಜಯಪುರ ಮೂಲದ ವ್ಯಕ್ತಿಯಲ್ಲಿ ರೂಪಾತಂರಿ ವೈರಸ್ ದೃಢ
ಪ್ರಗತಿವಾಹಿನಿ ಸುದ್ದಿ; ಮೈಸೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹಾಗೂ ರೂಪಾಂತರಿ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ನಡುವೆ ಮಹಾಮಾರಿ ಕೊರೊನಾ ಸೋಂಕಿಗೆ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಮೈಸೂರಿನಲ್ಲಿ 56 ವರ್ಷದ ವ್ಯಕ್ತಿಯಲ್ಲಿ ನಾಲ್ಕು ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ರಕ್ತದೊತ್ತಡದಿಂದಲೂ ಬಳಲುತ್ತಿದ್ದರು. ಇದೀಗ ಚಿಕಿತ್ಸೆ ಫಲಿಸದೇ ಸೋಂಕಿತರು ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ಮೈಸೂರಿನಲ್ಲಿ ಕೋವಿಡ್ ಗೆ ಮೊದಲ ಬಲಿಯಾಗಿದೆ.
ಇನ್ನು ವಿಜಯಪುರದಿಂದ ಬೆಂಗಳೂರಿಗೆ ಬಂದಿದ್ದ 40 ವರ್ಷದ ವ್ಯಕ್ತಿಯಲ್ಲಿ JN.1 ರೂಪಾಂತರಿ ವೈರಸ್ ಪತ್ತೆಯಾಗಿದೆ. ಡಿ.25ರಂದು ಹಾರ್ಟ್ ಆಪರೇಷನ್ ಗೆ ಎಂದು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಬಂದಿದ್ದ ವಿಜಯಪುರದ ನಿಡಗುಂದಿ ಮೂಲದ ವ್ಯಕ್ತಿಯಲ್ಲಿ ರೂಪಾಂತರಿ ವೈರಸ್ ಪತ್ತೆಯಾಗಿದೆ. ಅವರನ್ನು ಜಯದೇವ ಆಸ್ಪತ್ರೆಯಲ್ಲಿಯೇ ಪ್ರತ್ಯೇಕ ವಾರ್ಡ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಜ್ಯದಲ್ಲಿ ಕಳೆದ 7 ದಿನಗಳಲ್ಲಿ ಕೊರೊನಾ ಸೋಂಕಿಗೆ 9 ಜನರು ಬಲಿಯಾಗಿದ್ದಾರೆ. ಕೋವಿಡ್ ಸಕ್ರಿಯ ಪ್ರಕರಣ 479ಕ್ಕೆ ಏರಿಕೆಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ