Latest

ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಅಗತ್ಯ ಸೌಕರ್ಯ; ನೋಡಲ್ ಅಧಿಕಾರಿ ನೇಮಕ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಕ್ರಮ ಕೈಗೊಂಡಿದೆ. ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಲು ಬಾ.ಆ.ಸೇ ಮಹಾ ಪರಿವೀಕ್ಷಕರು ಮತ್ತು ಮುದ್ರಾಂಕ ಆಯುಕ್ತ ಕೆ.ಪಿ.ಮೋಹನ್ ರಾಜ್ ಅವರನ್ನು ರಾಜ್ಯ ನೋಡಲ್ ಅಧಿಕಾರಿಯನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ.

ಸಂಬಂಧಪಟ್ಟ ಎಲ್ಲಾ ಪ್ರಾಧಿಕಾರಗಳು ಈ ಕುರಿತು ಅಗತ್ಯ ಕ್ರಮಗಳನ್ನು ವಹಿಸಬೇಕು ಹಾಗೂ ಅಂತವರ ಪೋಷಣೆಗಾಗಿ ದೀರ್ಘಾವಧಿ ಸಹಕಾರ ನೀಡಬೇಕು ಎಂದು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ.
ಸರ್ಕಾರದ ನಿರ್ಲಕ್ಷ್ಯ ಮುಂದುವರಿದರೆ ಬೀದಿಗಿಳಿಯಬೇಕಾಗುತ್ತದೆ: ಸಿದ್ದರಾಮಯ್ಯ ಎಚ್ಚರಿಕೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button