
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಬಗ್ಗೆ ದೇಶಾದ್ಯಂತ ಭಾರಿ ಚರ್ಚೆ ನಡೆದಿದ್ದು, ರಾಜ್ಯ ಸರ್ಕಾರ ಸಚಿವರು, ಶಾಸಕರಿಗೆ ಸಿನಿಮಾ ನೋಡಲು ಆದೇಶ ನೀಡಿದೆ. ಇದೀಗ ಸಿನಿಮಾ ನೋಡಿ ಪ್ರತಿಕ್ರಿಯಿಸಿರುವ ವಸತಿ ಸಚಿವ ವಿ.ಸೋಮಣ್ಣ, ಮುಚ್ಚಿ ಹೋಗಿರುವ ಇತಿಹಾಸವನ್ನು ಜನರಿಗೆ ತಿಳಿಸಿಕೊಡಬೇಕಾಗಿದೆ. ಮುಂದಿನ ದಿನಗಳಲ್ಲಿ ಅಂತಹ ಘಟನೆ ಮತ್ತೆ ಮರುಕಳಿಸಬಾರದು ಎಂಬ ನಿಟ್ಟಿನಲ್ಲಿ ಚಿತ್ರ ತಯಾರಿಸಲಾಗಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಎಲ್ಲಾ ಮುಸ್ಲೀಂರು ಕೆಟ್ಟವರಲ್ಲ, ಎಲ್ಲಾ ಹಿಂದೂಗಳೂ ಒಳ್ಳೆಯವರಲ್ಲ. ಒಬ್ಬೊಬ್ಬರದ್ದು ಒಂದೊಂದು ರೀತಿಯ ಅಭಿಪ್ರಾಯ, ವ್ಯಕ್ತಿತ್ವವಿರುತ್ತದೆ ಎಂದು ಹೇಳಿದರು.
ಇದೇ ವೇಳೆ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ನನಗೇನೂ ಗೊತ್ತಿಲ್ಲ. ಪಠ್ಯಪುಸ್ತಕ ರಚನೆಗೆ ಸಮಿತಿ ಇರುತ್ತದೆ. ಸಮಿತಿಯವರು ಸೇರ್ಪಡೆ ಬಗ್ಗೆ ತೀರ್ಮಾನಿಸುತ್ತಾರೆ. ಮುಂದಿನ ಪೀಳಿಗೆಗೆ ಏನು ತಿಳಿಸಬೇಕು ಎಂಬುದರ ಬಗ್ಗೆ ಸಮಿತಿ ತೀರ್ಮಾನಿಸುತ್ತದೆ ಎಂದು ಹೇಳಿದರು.
ಪಠ್ಯಕ್ರಮದಲ್ಲಿ ಭಗವದ್ಗೀತೆ ವಿಚಾರ; ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್