Latest

ಕೋವಿಡ್ ಸಾವಿಗೆ ದೃಢೀಕರಣ ಪ್ರಮಾಣಪತ್ರ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೋವಿಡ್ ಗೆ ಬಲಿಯಾದವರ ಸಾವಿನ ಸಂಖ್ಯೆಯನ್ನು ಮುಚ್ಚಿಡಲಾಗುತ್ತಿದೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದು, ಕೊರೊನಾದಿಂದ ಸಾವನ್ನಪ್ಪಿದವರ ಬಗ್ಗೆ ದೃಢಿಕರಣ ಪ್ರಮಾಣಪತ್ರ ನೀಡುವುದಾಗಿ ತಿಳಿಸಿದೆ.

6 ರಾಜ್ಯಗಳಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ ಮುಚ್ಚಿಡಲಾಗುತ್ತಿದೆ ಎಂಬ ವರದಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 183 ಪುಟಗಳ ಅಫಿಡವಿಟ್ ನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದೆ.

ಕೊರೊನಾದಿಂದ ವ್ಯಕ್ತಿ ಸಾವನ್ನಪ್ಪಿದ್ದರೆ ದೃಢೀಕರಣ ಮರಣ ಪ್ರಮಾಣಪತ್ರ ನೀಡುವುದಾಗಿ ಸರ್ಕಾರ ತಿಳಿಸಿದೆ.

ಬಿಜೆಪಿಯಲ್ಲಿ ಬ್ಲ್ಯಾಕ್ ಮೇಲ್ ರಾಜಕಾರಣ; ರಮೇಶ್ ಜಾರಕಿಹೊಳಿಯನ್ನು ಬಂದಿಸಿಲ್ಲವೇಕೆ? ಡಿಕೆಶಿ ಪ್ರಶ್ನೆ

Home add -Advt

Related Articles

Back to top button