Latest

ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ದುರಂತ; 10 ಜನರು ಸಜೀವ ದಹನ

ಪ್ರಗತಿವಾಹಿನಿ ಸುದ್ದಿ; ರುಮೇನಿಯಾ: ಒಂದೆಡೆ ಬೆಳಗಿನ ಹಬ್ಬ ದೀಪಾವಳಿ ಸಂಭ್ರಮವಾದರೆ ಇನ್ನೊಂದೆಡೆ ಅಗ್ನಿ ಅವಘಡಗಳ ಸಂಖ್ಯೆ ಹೆಚ್ಚುತ್ತಿದೆ. ಕೋವಿಡ್ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 10 ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ರುಮೇನಿಯಾದಲ್ಲಿ ಸಂಭವಿಸಿದೆ.

ಇಲ್ಲಿನ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಈ ಅವಘಡ ಸಂಭವಿಸಿದ್ದು, ಅಕ್ಕಪಕ್ಕದ ಕೋಣೆಗಳಿಗೂ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ. ಘಟನೆಯಲ್ಲಿ 10 ಜನರು ಸಜೀವ ದಹನಗೊಂಡಿದ್ದರೆ ವೈದ್ಯರು ಸೇರಿ 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆಯಲ್ಲಿ ದೇಹದ ಶೇ.40ರಷ್ಟು ಭಾಗ ಸುಟ್ಟು ಗಾಯಗೊಂಡಿರುವ ವೈದ್ಯರನ್ನು ಬುಚಾರೆಸ್ಟ್ ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಚಿವ ನೆಲು ಟಾಟಾ ಮಾಹಿತಿ ನೀಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button