Kannada NewsLatestNational

*ಕೊರೊನಾ ಸೋಂಕಿಗೆ ಐವರು ಬಲಿ; 335 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಮತ್ತೆ ಮಹಾಮಾರಿ ಕೊರೊನಾ ಅಟ್ಟಹಾಸ ಆರಂಭವಾಗಿದೆ. ಕೇರಳದಲ್ಲಿ ಕೊರೊನಾ ರೂಪಾಂತರ ಹೊಸ ತಳಿ JN.1 ವ್ಯಾಪಕವಾಗಿ ಹರಡುತ್ತಿದ್ದು, ಕರ್ನಾಟಕದಲ್ಲಿಯೂ ಆತಂಕ ಶುರುವಾಗಿದೆ.

ಇನ್ನೊಂದೆಡೆ ದೇಶದಲ್ಲಿ ಒಂದೇ ದಿನದಲ್ಲಿ 335 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇರಳ, ಉತ್ತರ ಪ್ರದೇಶ ಸೇರಿದಂತೆ ಒಂದೇ ದಿನಲ್ಲಿ ಮಹಾಮಾರಿಗೆ ಐವರು ಬಲಿಯಾಗಿದ್ದಾರೆ.

ದೇಶಾದ್ಯಂತ ಮತ್ತೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕೇಂದ್ರ ಆರೊಗ್ಯ ಇಲಾಖೆ ಆಯಾ ರಾಜ್ಯಗಳಿಗೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button