*ಮಾಜಿ ಸಿಎಂ ಯಡಿಯೂರಪ್ಪಗೆ ‘ಕೋವಿಡ್’ ಸಂಕಷ್ಟ: ಬಿಎಸ್ ವೈ,ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಶಿಫಾರಸು*
ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಕಿಟ್ ಖರೀಯಲ್ಲಿನ ಹಗರಣಕ್ಕೆ ಸಂಬಂಧಿಸಿದಂತೆ ಫ್ರಾಸಿಕ್ಯೂಷನ್ ಗೆ ಶಿಫಾರಸು ಮಾಡಲಾಗಿದೆ.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ ಕುನ್ಹಾ ನೇತೃತ್ವದ ತನಿಖಾ ಆಯೋಗ, ಕೋವಿಡ್ ಸಂದರ್ಭದಲ್ಲಿ ಪಿಪಿಇ ಕಿಟ್ ಹಾಗೂ ಇತರ ಸಾಮಗ್ರಿಗಳ ಖರೀದಿಯಲ್ಲಿ ಅಕ್ರಮ ನಡೆದಿರುವುದು ನಿಜ ಎಂದು ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವರಾಗಿದ್ದ ಬಿ.ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಆಯೋಗ ಶಿಫಾರಸು ಮಾಡಿದೆ.
ಪಿಪಿಇ ಕಿಟ್ ಖರೀದಿ ವೇಳೆ ದರ ವ್ಯತ್ಯಾಸ ಮಾಡಿ ಪೂರೈಕೆದಾರರಿಗೆ 14.21 ಕೋಟಿ ರೂ ಲಾಭಮಾಡಿಕೊಡಲಾಗಿದೆ. ಪೂರೈಕೆದಾರರಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ಅಕ್ರಮವೆಸಗಲಾಗಿದೆ ಎಂದು ವರದಿಯಲ್ಲಿ ಹೇಳಿದೆ.
ತನಿಖಾ ಆಯೋಗ ನೀಡಿರುವ ಮಧ್ಯಂತರ ವರದಿಯಲ್ಲಿ ಒಟ್ಟು 769ಕೋಟಿ ರೂ ಅವ್ಯವಹಾರ ನಡೆದಿದೆ ಎಂದು ತಿಳಿಸಿದೆ. ಎಸ್ ಐಟಿ ರಚಿಸಿ ತನಿಖೆ ನಡೆಸುವಂತೆ ಸರ್ಕಾರಕ್ಕೆ ಆಯೋಗ ಶಿಫಾರಸು ಮಾಡಿದೆ.
ಇನ್ನು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಡಾ.ಕೆ.ಸುಧಾಕರ್ ಆರೋಗ್ಯ ಸಚಿವರಾಗಿದ್ದ ಸಂದರ್ಭದಲ್ಲಿಯೂ ಕೋವಿಡ್ ಕಿಟ್ ಖರೀದಿಯಲ್ಲಿ ಅಕ್ರಮ ಆರೋಪ ಕೇಳಿಬಂದಿದ್ದು, ಈ ಅವಧಿಯ ಪ್ರಕರಣದ ಬಗ್ಗೆ ಆಯೋಗ ತನಿಖೆ ನಡೆಸುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ