
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಮಾಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವವರಿಗೆ ಹೊಸ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.
ಈ ನಿಯಮ ಕರ್ನಾಟಕದಲ್ಲಿ 2-3 ದಿನಗಳವರೆಗೆ ಇರಲು ಉದ್ದೇಶಿಸಿದವರಿಗೆ ಮಾತ್ರ ಅನ್ವಯವಾಗಲಿದೆ. ಮುಂಬೈ ಹಾಗೂ ಮಹಾರಷ್ಟ್ರದಿಂದ ಆಗಮಿಸುವವರಿಗೆ ವಿಶೇಷ ಮಾರ್ಗಸೂಚಿಗಳನ್ನು ಅಳವಡಿಸಲಾಗಿದೆ ಎಂದು ಕರ್ನಾಟಕ ಆರೋಗ್ಯ ಇಲಾಖೆ ಟ್ವೀಟ್ ಮಾಡಿದೆ.
* ಕೋವಿಡ್ ಲಕ್ಷಣಗಳಿಲ್ಲದ ಪ್ರಯಾಣಿಕರಿಗೆ ಮಾತ್ರ ಕರ್ನಾಟಕ ಪ್ರವೇಶಕ್ಕೆ ಅವಕಾಶ. ಜ್ವರ, ನೆಗಡಿ, ಕೆಮ್ಮು, ಗಂಟಲು ನೋವು, ಉಸಿರಾಟದ ತೊಂದರೆಯಂತಹ ಲಕ್ಷಣಗಳು ಇರಬಾರದು.
* ರಾಜ್ಯಕ್ಕೆ ಆಗಮಿಸಿದ ಬಳಿಕ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್
* ಅಲ್ಪಾವಧಿ ವಾಸ್ತವ್ಯದ ಪುರಾವೆಯಾಗಿ ಮಾನ್ಯವಾದ ರಿಟರ್ನ್ ಟಿಕೆಟ್
* ಎರಡು ಡೋಸ್ ವ್ಯಾಕ್ಸಿನೇಷನ್ ಪ್ರಮಾಣ ಪತ್ರ ತೋರಿಸುವುದು ಕಡ್ಡಾಯ
* ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ
* ರೈಲು, ಬಸ್, ರಸ್ತೆ ಮಾರ್ಗವಾಗಿ ಮಹಾರಾಷ್ಟ್ರದಿಂದ ಕರ್ನಾಟಕ್ಕೆ ಬರುವವರಿಗೆ ಈ ನಿಯಮ ಅನ್ವಯ
ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣ ಹೆಚ್ಚಿರುವ ಹಿನ್ನಲೆಯಲ್ಲಿ ಕರ್ನಾಟಕಕ್ಕೆ ಆಗಮಿಸುವವರಿಗೆ ಹೊಸ ಕೊವಿಡ್ ನಿಯಮಗಳನ್ನು ಹೊರಡಿಸಲಾಗಿದೆ.
ವಿಧಾನಪರಿಷತ್ ಚುನಾವಣೆಗೆ ದಿನಾಂಕ ಪ್ರಕಟ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ