Latest

ಕೊರೊನಾ ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನ

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಮೇಲೆ ಆಂಬುಲೆನ್ಸ್ ಚಾಲಕ ಅತ್ಯಾಚಾರ ನಡೆಸಲು ಯತ್ನಿಸಿರುವ ಘಟನೆ ಕಲಬುರ್ಗಿಯ ಜಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.

ಜಿಮ್ಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದ್ದು, ಸೋಂಕಿತೆ ಮೇಲೆ ಆಂಬುಲೆನ್ಸ್ ಚಾಲಕ ಪಿಂಟು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಹಿಳೆ ಚೀರಾಟಕ್ಕೆ ಅಕ್ಕಪಕ್ಕದ ರೋಗಿಗಳು ಎಚ್ಚರಗೊಂಡಿದ್ದರಿಂದ ಆರೋಪಿ ಓಡಿಹೋಗಿದ್ದಾನೆ ಎನ್ನಲಾಗಿದೆ.

ಇದೀಗ ಆರೋಪಿ ಪಿಂಟು (25) ಎಂಬಾತನನ್ನು ಬ್ರಹ್ಮಪುರ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಳ್ಳಿ – ಸುರೇಶ ಕುಮಾರ ಸೂಚನೆ

Related Articles

Back to top button