ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜಕಾರಣಿಗಳು, ಧಾರ್ಮಿಕ ಮುಖಂಡರೇ ಕೊರೊನಾ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿದ್ದಾರೆ. ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಹೈಕೋರ್ಟ್ ಸೂಚಿಸಿದೆ.
ಕೊರೊನಾ ಹೆಚ್ಚುತ್ತಿದ್ದರೂ ಮಾಸ್ಕ್ ಧರಿಸಿ, ದೈಹಿಕ ಅಂತರ ಪಾಲನೆ ಮಾಡಿ ಜನರಿಗೆ ಮಾದರಿಯಾಗಬೇಕಿದ್ದ ರಾಜಕೀಯ ನಾಯಕರು, ಧಾರ್ಮಿಕ ಮುಖಂಡರೇ ಕೋವಿಡ್ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ. ರಾಜಕೀಯ ರ್ಯಾಲಿ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ. ಇಂತಹವರ ವಿರುದ್ಧ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ ಅಡಿಯಲ್ಲಿ ಎಫ್ ಐಆರ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಎಲ್ಲಾ ಪೊಲೀಸ್ ಠಾಣೆಗಳಿಗೆ ಹೈಕೋರ್ಟ್ ವಿಭಾಗೀಯ ಪೀಠ ಸೂಚಿಸಿದೆ.
ಚಿತ್ರ ನಟರು ಕೂಡ ಕೋವಿಡ್ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ. ಆರೋಗ್ಯಕರ ಜೀವನ ನಡೆಸುವುದು ಸಂವಿಧಾನ ನೀಡಿದ ಹಕ್ಕು. ಜನರ ಹಕ್ಕುಗಳ ರಕ್ಷಣೆ ಸರ್ಕಾರದ ಕರ್ತವ್ಯ ಸಿಜೆ ಎ.ಎಸ್.ಒಕಾ, ನ್ಯಾ.ಸೂರಜ್ ಗೋವಿಂದ್ ರಾಜ್ ಅವರಿದ್ದ ಪೀಠ ಅಭಿಪ್ರಾಯಪಟ್ಟಿದೆ.
ರೋಡ್ ಶೋ ಅರ್ಧಕ್ಕೆ ಮೊಟಕುಗೊಳಿಸಿ ತೆರಳಿದ ಸಿಎಂ ಯಡಿಯೂರಪ್ಪ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ