Latest

ರಾಜ್ಯದಲ್ಲಿ ವೀಕ್ ಎಂಡ್ ಕರ್ಫ್ಯೂ ರದ್ದು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ಸಭೆಯಲ್ಲಿ ರಾಜ್ಯದಲ್ಲಿ ಜಾರಿಯಲ್ಲಿದ್ದ ವೀಕ್ ಎಂಡ್ ಕರ್ಫ್ಯೂ ರದ್ದುಗೊಳಿಸಲು ನಿರ್ಧರಿಸಲಾಗಿದೆ.

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ತಜ್ಞರ ಸಭೆ ನಡೆದಿದ್ದು, ಈ ಸಭೆಯಲ್ಲಿ ಸುದೀರ್ಘ ಚರ್ಚಿಸಿ ನಿರ್ಧಾರಕ್ಕೆ ಬರಲಾಗಿದೆ.

ನಾಳೆಯಿಂದಲೇ ರಾಜ್ಯದಲ್ಲಿದ್ದ ವಾರಾಂತ್ಯ ಕರ್ಫ್ಯೂ ರದ್ದಾಗಲಿದೆ.

ತಜ್ಞರೊಂದಿಗಿನ ಮುಖ್ಯಮಂತ್ರಿಗಳ ಸಭೆ ಇನ್ನೂ ಮುಕ್ತಾಯವಾಗಿಲ್ಲ. ಸಭೆಯ ಬಳಿಕ ಸಂಪೂರ್ಣ ವಿವರ ಹೊರಬೀಳಲಿದೆ.

ಕೊರೊನಾ ಮೂರನೇ ಅಲೆ ತೀವ್ರತೆ ಅಷ್ಟಾಗಿ ಇರದ ಕಾರಣ ಅಪಾಯವಿಲ್ಲ. ಹಾಗಾಗಿ ವೀಕೆಂಡ್ ಕರ್ಫ್ಯೂ ನೈಟ್ ಕರ್ಫ್ಯೂ ನಿಯಮ ಸಡಿಲಿಸಬೇಕು ಎಂಬ ಕೂಗು ರಾಜ್ಯಾದ್ಯಂತ ಕೇಳಿಬಂದಿತ್ತು, ಉದ್ಯಮಿಗಳು, ವ್ಯಾಪಾರಿಗಳು ಅಷ್ಟೇ ಅಲ್ಲ ಸ್ವತ: ಬಿಜೆಪಿ ಸಚಿವರು, ಶಾಸಕರೇ ಲಾಕ್ ಡೌನ್ , ಕರ್ಫ್ಯೂ ನಿಯಮಗಳಿಗೆ ವಿರೋಧ ವ್ಯಕ್ತಪಡಿಸಿದ್ದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಈಶ್ವರಪ್ಪ ಸೇರಿದಂತೆ ಹಲವು ನಾಯಕರು ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ವಿಸ್ತರಣೆಗೆ ವಿರೋಧ ವ್ಯಕ್ತಪಡಿಸಿದ್ದರು. ಜನರಿಗೆ ಸಮಸ್ಯೆಯಾಗಲಿದೆ ಎಂಬ ಕಾರಣಕ್ಕೆ ಕೋವಿಡ್ ಮಾರ್ಗಸೂಚಿ ಸಡಿಲಿಸುವಂತೆ ಸಾರ್ವಜನಿಕರಿಂದ ಹಿಡಿದು ಜನ ನಾಯಕರವರೆಗೂ ಒಂದೇ ಬೇಡಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಗೊಂದಲಕ್ಕೀಡಾಗಿತ್ತು.

ರಾಜಕೀಯ ನಿವೃತ್ತಿ ಸುಳಿವು ನೀಡಿದ್ರಾ ಸಂಸದ ಅನಂತ ಕುಮಾರ್ ಹೆಗಡೆ?

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button