ಪ್ರಗತಿವಾಹಿನಿ ಸುದ್ದಿ: ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ಹಾ ಇವರ ನೇತೃತ್ವದ ತಂಡ ಕೋವಿಡ್ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿತು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್-19ರ ನಿರ್ವಹಣಾ ಉಪಕರಣಗಳ ಖರಿದಿ, ರ್ಯಾಪಿಡ್ ಆಂಟಿಜನ್ ಟೆಸ್ಟ್ ಕಿಟ್ ಗಾ ಖರೀದಿ, ಆಕ್ಸಿಜನ್ ಉಪಕರಣಗಳ ಖರೀದಿ, ನಿರ್ವಹಣೆಯಲ್ಲಿ ಲೋಪ, ವೆಂಟಿಲೇಟರ್ ಗಳ ಖರೀದಿಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸುತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ತನಿಖಾ ಆಯೋಗ ರಚಿಸಿ ವರದಿ ನೀಡುವಂತೆ ಸೂಚಿಸಿತ್ತು. ಈ ನಿಟ್ಟಿನಲ್ಲಿ ಕೋವಿಡ್ ಹಗರಣ ಕುರಿತ ತನಿಖಾ ವರದಿಯನ್ನು ಜಸ್ಟಿಸ್ ಜಾನ್ ಮೈಕೆಲ್ ಡಿ.ಕುನ್ಹಾ ನೇತೃತ್ವದ ತನಿಖಾ ಆಯೋಗ ಸಿಎಂ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿದೆ.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ