ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ 2ನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಲಾಕ್ ಡೌನ್ ಜಾರಿ ಮಾಡಿದ್ದು, ಆರ್ಥಿಕ ಸಂಕಷ್ಟಕ್ಕೀಡಾದವರಿಗೆ ವಿಶೇಷ ಪ್ಯಾಕೆಜ್ ಘೋಷಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆ ಚರ್ಚಿಸಿ ನಿರ್ಧರಿಸುವುದಾಗಿ ಕಂದಾಯ ಸಚಿವ ಆರ್,ಅಶೋಕ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ವಿಶೇಷ ಪ್ಯಾಕೆಜ್ ಘೋಷಿಸುವ ಬಗ್ಗೆ ಇಂದು ಸಿಎಂ ನೇತೃತ್ವದಲ್ಲಿ ನಡೆಯಲಿರುವ ಸಚಿವರು, ಅಧಿಕಾರಿಗಳ ಸಭೆಯಲ್ಲಿ ಚರ್ಚಿಸಿ ನಿರ್ಧರಿಸುವುದಾಗಿ ತಿಳಿಸಿದರು.
ಕಳೆದ ಒಂದು ವಾರದಿಂದ ಸೋಂಕಿತರಿಗೆ ಬೆಡ್ ವ್ಯವಸ್ಥೆ ಸುಧಾರಣೆಯಾಗಿದೆ. ಪ್ರತಿ ತಾಲೂಕು ಕೇಂದ್ರಗಳಲ್ಲೂ ಆಕ್ಸಿಜನ್ ಕಾನ್ಸಟ್ರೇಟರ್ ಗಳನ್ನು ನೀಡಲಾಗುತ್ತದೆ. ರೆಮ್ ಡಿಸಿವಿರ್ ಹಾಗೂ ಕೂರೊನಾ ಲಸಿಕೆ ಕೇಂದ್ರದಿಂದ ಪೂರೈಕೆಯಾಗುತ್ತಿದ್ದಂತೆ ಹಂಚಿಕೆ ಮಾಡಲಾಗುತ್ತಿದೆ ಎಂದರು.
2-3 ವಾರದಲ್ಲಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಆದರೆ…
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ