ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೋವಿಡ್ 4ನೇ ಅಲೆ ಬಂದೆರಗಬಹುದಾದ ಸಾಧ್ಯತೆಗಳ ಹಿನ್ನೆಲೆಯಲ್ಲಿ ಅದನ್ನು ಎದುರಿಸಲು ಸಾಂಬ್ರಾದ ಏರ್ ಫೋರ್ಸ್ ಸಿಬ್ಬಂದಿ ಹಾಗೂ ಅವರ ಕುಟುಂಬ ಸದಸ್ಯರಿಗೆ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ಲಸಿಕಾಕರಣ (ಬೂಸ್ಟರ್ ಡೋಸ್) ಶಿಬಿರವನ್ನು ಏರ್ ಫೋರ್ಸ್ ಆವರಣದಲ್ಲಿ ಏರ್ಪಡಿಸಿತ್ತು.
ಕೋವಿಡ್ 4 ಅಲೆಯನ್ನು ತಡೆಯಲು ಹಾಗೂ ಅಪಾಯದ ಗತಿಯನ್ನು ಕಡಿಮೆ ಮಾಡಲು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರವು ಬೆಳಗಾವಿ ಜಿಲ್ಲೆಯ ಜನರಿಗೆ ಕೋವಿಡ್ ವ್ಯಾಕ್ಸಿನ್ ನೀಡಲು ಕ್ರಮಕೈಕೊಂಡಿದೆ. ಅದರಂತೆ ಕಳೆದ ವರ್ಷದಿಂದ ನಿರಂತರವಾಗಿ ಲಸಿಕೆ ನೀಡುವಲ್ಲಿ ತೊಡಗಿಕೊಂಡಿದೆ. ಪ್ರಥಮ, ದ್ವಿತೀಯ ಡೋಸ್ ಪಡೆದವರಿಗೆ ಬೂಸ್ಟರ್ ಡೋಸ್ ನೀಡಲಾಗುತ್ತಿದೆ.
ಈ ಸಂದರ್ಭದಲ್ಲಿ ಏರ್ ಫೋರ್ಸ್ ನ ದಿಲೀಪಕುಮಾರ, ಶ್ರೀಧರ, ಆಸ್ಪತ್ರೆಯ ಡಾ. ರಾಗಿನಿ, ಆಡಳಿತಾಧಿಕಾರಿ ಡಾ. ರಾಜಶೇಖರ ಸೋಮನಟ್ಟಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಕೋವಿಡ್ ನೀಡುವಲ್ಲಿ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯಕೀಯ ತಂಡವನ್ನು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಹಾಗೂ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಎಂ.ವಿ. ಜಾಲಿ ಅಭಿನಂದಿಸಿದ್ದಾರೆ.
ಕೆಪಿಸಿಸಿ ವಕ್ತಾರರ ಮನೆಯ ಬಳಿಯೇ ಗಾಂಜಾ ಬೆಳೆ; ಪೊಲೀಸರಿಗೆ ಮಾಹಿತಿ ನೀಡಿದ ಬೇಳೂರು ಗೋಪಾಲಕೃಷ್ಣ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ