Latest

ಕೊರೊನಾ ಲಸಿಕೆ ಪಡೆದ ನಾಲ್ಕು ವೈದ್ಯರಲ್ಲಿ ಸೋಂಕು ದೃಢ

ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ದೇಶಾದ್ಯಂತ ಕೊರೊನಾ ಲಸಿಕೆ ನೀಡಿಕೆ ಅಭಿಯಾನ ಆರಂಭವಾಗಿದ್ದು, ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್ ಗೆ ಲಸಿಕೆ ಹಾಕಲಾಗುತ್ತಿದೆ. ಆದರೆ ಇದೀಗ ಲಸಿಕೆ ಪಡೆದ ಹಲವರಲ್ಲಿ ಸೋಂಕು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಪಡೆದ ನಾಲ್ವರು ವೈದ್ಯರಲ್ಲಿ ಕೊರೊನಾ ಸೋಂಕಿನ ಲಕ್ಷಣ ಪತ್ತೆಯಾಗಿದೆ. ಕೋವಿಡ್ ನೋಡಲ್ ಅಧಿಕಾರಿ ಡಾ.ಮಹೇಶ್, ಸಿಮ್ಸ್ ಸಹಾಯಕ ಪ್ರಾಧ್ಯಾಪಕ ಡಾ.ಹರ್ಷ, ವೈದ್ಯರಾದ ದಮಯಂತಿ, ಗಿರೀಶ್, ಶಶಾಂಕ್, ನವೀನ್ ಚಂದ್ರ ಹಾಗೂ ಚೇತನ್ ಅವರಿಗೆ ಸೋಂಕಿನ ಲಕ್ಷಣಗಳು ಕಂಡುಬಂದಿವೆ.

Home add -Advt

ಲಸಿಕೆ ಪಡೆದ ಒಂದೇ ವಾರದಲ್ಲಿ ಸೋಂಕಿನ ಲಕ್ಷಣ ಕಂಡುಬಂದಿದ್ದು, ಇವರಲ್ಲಿ ನಾಲ್ವರು ವೈದ್ಯರಾಗಿದ್ದಾರೆ.

Related Articles

Back to top button