Latest

ಕೋವಿಡ್ ಲಸಿಕಾ ಅಭಿಯಾನದಲ್ಲಿ ಹೊಸ ದಾಖಲೆ ಬರೆದ ಭಾರತ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೋವಿಡ್ ಲಸಿಕಾ ಅಭಿಯಾನದಲ್ಲಿ ಭಾರತ ಹೊಸ ದಾಖಲೆ ಬರೆದಿದ್ದು, 100 ಕೋಟಿ ಡೋಸ್ ಲಸಿಕೆ ನೀಡಿಕೆ ಪೂರ್ಣಗೊಳಿಸಿದೆ.

ಕಳೆದ 9 ತಿಂಗಳಲ್ಲಿ ಬರೋಬ್ಬರಿ 100 ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಈ ಮೂಲಕ ಕೋವಿಡ್ ಲಸಿಕಾ ಅಭಿಯಾನದಲ್ಲಿ ಭಾರತ ಹೊಸ ಮೈಲುಗಲ್ಲು ಸ್ಥಾಪಿಸಿದಂತಾಗಿದೆ.

Home add -Advt

ಈ ನಡುವೆ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 18,454 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ 178831 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 33495808 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಇನ್ನು ಕೊರೊನಾ ಸೋಂಕಿನಿಂದ ದೇಶದಲ್ಲಿ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 4,52,811ಕ್ಕೆ ಏರಿಕೆಯಾಗಿದೆ.

Related Articles

Back to top button