Politics

*ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಸಂಸದ ಪ್ರಜ್ವಲ್ ರೇವಣ್ಣ*

ಪ್ರಗತಿವಾಹಿನಿ ಸುದ್ದಿ: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧನ ಭೀತಿಯಲ್ಲಿದ್ದು, ಇದೀಗ ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

Home add -Advt

ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಈ ನಡುವೆ ಸೋಮವಾರ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದ ಪ್ರಜ್ವಲ್, ಮೇ 31ರಂದು ಎಸ್ಐಟಿ ಮುಂದೆ ಹಾಜರಾಗುವುದಾಗಿ ತಿಳಿಸಿದ್ದರು. ಈ ನಿಟ್ಟಿನಲ್ಲಿ ಪ್ರಜ್ವಲ್ ದೇಶಕ್ಕೆ ಆಗಮಿಸುತ್ತಿದ್ದಂತೆ ಏರ್ ಪೋರ್ಟ್ ನಲ್ಲಿಯೇ ಅವರನ್ನು ಬಂಧಿಸಲು ಎಸ್ಐಟಿ ಸಿದ್ಧತೆ ನಡೆಸಿದೆ.

ಇದೀಗ ತಮ್ಮ ವಿರುದ್ಧ ದಾಖಲಾಗಿರುವ ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

Related Articles

Back to top button