Latest

18 ವರ್ಷದೊಳಗಿನ 1 ಕೋಟಿ ಮಕ್ಕಳಿಗೆ ಕೋವಿಡ್ ಲಸಿಕೆ

ಪ್ರಗತಿ ವಾಹಿನಿ ಸುದ್ದಿ ನವದೆಹಲಿ – ದೇಶಾದ್ಯಂತ ೧೫-೧೮ ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದ್ದು ಈ ವರೆಗೆ ೧ ಕೋಟಿಗೂ ಹೆಚ್ಚು ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಕ್ ಮಾಂಡವೀಯ ಹೇಳಿದ್ದಾರೆ.

ಕಳೆದ ವರ್ಷ ಡಿ.೨೫ರಂದು ಪ್ರಧಾನಿ ನರೇಂದ್ರ ಮೋದಿ ಅವರು ೧೫-೧೮ ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಬಗ್ಗೆ ಘೋಷಣೆ ಮಾಡಿದ್ದರು. ಬಳಿಕ ಜ.೩ರಿಂದ ಲಸಿಕೆ ನೀಡಲು ಪ್ರಾರಂಭಿಸಲಾಯಿತು. ಈ ಕುರಿತು ಟ್ವೀಟ್ ಮಾಡಿದ ಸಚಿವರು ೧೫-೧೮ ವರ್ಷದೊಳಗಿನ ೧ ಕೋಟಿಗೂ ಹೆಚ್ಚು ಮಕ್ಕಳಿಗೆ ಲಸಿಕೆ ನೀಡಲಾಗಿದ್ದು ಐತಿಹಾಸಿಕ ಸಾಧನೆ ಎಂದು ಬಣ್ಣಿಸಿದ್ದಾರೆ.

ಒಟ್ಟು ೫ ಕೋಟಿಗೂ ಹೆಚ್ಚು ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೊವಿನ್‌ನ ದಾಖಲೆಯ ಪ್ರಕಾರ ಈವರೆಗೆ ಸುಮಾರು ೫ಕೋಟಿಗೂ ಹೆಚ್ಚು ಮಕ್ಕಳು ಲಸಿಕೆಗಾಗಿ ನೋಂದಣಿ ಮಾಡಿಕೊಂಡಿದ್ದಾರೆ.

ನಾಳೆಯಿಂದ ಮಕ್ಕಳಿಗೆ ಕೊರೊನಾ ಲಸಿಕೆ

ಬೆಳಗಾವಿ: ಉಪವಾಸ ಸತ್ಯಾಗ್ರಹನಿರತ ವ್ಯಾಪಾರಿ ಅಸ್ವಸ್ಥ (ವಿಡೀಯೋ ಸಹಿತ ಸುದ್ದಿ)

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button