ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ಅಟ್ಟಹಾಸ ಆರಂಭವಾಗುವ ಭೀತಿ ಶುರುವಾಗಿದೆ. ಕೊರೊನಾ ಹೊಸ ರೂಪಾಂತರಿ EG.5 ವೈರಸ್ ವಿದೇಶಗಳಲ್ಲಿ ಆತಂಕ ಸೃಷ್ಟಿಸಿದ್ದು, ರಾಜ್ಯ ರಾಜಧಾನಿಯಲ್ಲಿಯೂ ಕಟ್ಟೆಚ್ಚರಕ್ಕೆ ಸೂಚನೆ ನೀಡಲಾಗಿದೆ.
ಒಮಿಕ್ರಾನ್ ತಳಿಯ ರೂಪಾಂತರಿ EG.5 ವೈರಸ್ ಅತಿವೇಗವಾಹಿ ಹರಡುತ್ತದೆ. ಜಪಾನ್, ಅಮೆರಿಕಾ, ಬ್ರಿಟನ್ ನಲ್ಲಿ ಈ ರೂಪಾಂತರಿ ವೈರಸ್ ಜನರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ವಿದೇಶಗಳಲ್ಲಿ ರೂಪಾಂತರಿ ವೈರಸ್ ವೇಗವಾಗಿ ಹರಡುತ್ತಿದೆ. ಹಾಗಾಗಿ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಇನ್ನು ಕರ್ನಾಟಕದಲ್ಲಿಯೂ ರೂಪಾಂತರಿ ವೈರಸ್ ಆತಂಕ ಎದುರಾಗಿದ್ದು, ಜ್ವರ, ಕೆಮ್ಮು, ನೆಗಡಿ, ಉಸಿರಾಟ ತೊಂದರೆ, ಆಯಾಸ, ಸ್ನಾಯು ಸೆಳೆತ, ತಲೆನೋವು, ಗಂಟಲು ನೋವು, ಮೂಗಿನಲ್ಲಿ ಸೋರುವಿಕೆ, ವಾಕರಿಕೆ, ವಾಂತಿ ಕಂಡುಬಂದಲ್ಲಿ ನಿರ್ಲಕ್ಷ ಮಾಡದೇ ಚಿಕಿತ್ಸೆ ಪಡೆದುಕೊಳ್ಳುವಂತೆ ಆರೊಗ್ಯ ಇಲಾಖೆ ಸೂಚನೆ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ