ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯಾದ್ಯಂತ ಮತ್ತೆ ಮಹಾಮಾರಿ ಕೊರೊನಾ ಸೋಂಕು ಹೆಚ್ಚುವ ಭೀತಿ ಎದುರಾಗಿದ್ದು, ಮುಂಜಾಗೃತಾ ಕ್ರಮಕ್ಕೆ ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಮುಂದಾಗಿದೆ. ಈ ನಿಟ್ಟಿನಲ್ಲಿ ನಾಳೆ ಬೆಳಿಗ್ಗೆ ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್.ಅಶೋಕ್ ತುರ್ತು ಸಭೆ ಕರೆದಿದ್ದಾರೆ.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್.ಅಶೋಕ್, ಕೋವಿಡ್ ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ತುರ್ತಾಗಿ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ನಾಳೆ ಬೆಳಿಗ್ಗೆ ಬೆಂಗಳೂರಿನಲ್ಲಿ ಕೋವಿಡ್ ತುರ್ತು ಸಭೆ ಕರೆದಿದ್ದೇನೆ. ವಿಪತ್ತು ನಿರ್ವಹಣಾ ಸಮಿತಿಯ ಉಪಾಧ್ಯಕ್ಷನೂ ನಾನಿರುವುದರಿಂದ ಆರೋಗ್ಯ, ಕಂದಾಯ, ಪೊಲೀಸ್ ಇಲಾಖೆ ಅಧಿಕಾರಿಗಳ ತುರ್ತು ಸಭೆ ಕರೆದಿದ್ದೇನೆ ಎಂದು ತಿಳಿಸಿದರು.
ಸಭೆಯಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಅವರೂ ಭಾಗಿಯಾಗಲಿದ್ದಾರೆ. ತುರ್ತಾಗಿ ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಹೊಸ ವರ್ಷಕ್ಕೆ ಜಾರಿಗೊಳಿಸಬೇಕಾದ ಕೋವಿಡ್ ನಿಯಮಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.
*Covid Alert: ಖಾಸಗಿ ಶಾಲೆ, ವಿಶ್ವ ವಿದ್ಯಾಲಯಗಳಲ್ಲಿ ಮಾಸ್ಕ್ ಕಡ್ಡಾಯ*
https://pragati.taskdun.com/bangalore-universityprivate-schools-mask-mandatorybangalore/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ