Latest

ರಾಜ್ಯದಲ್ಲಿ ಕೋವಿಡ್ ಸಾವಿನ ಪ್ರಮಾಣ ಶೇ.1.02

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ದೇಶದಲ್ಲಿ ಕೊರೋನಾ ಸೋಂಕಿತರ ಮತ್ತು ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕರ್ನಾಟಕದಲ್ಲೂ ಈ ಪ್ರಮಾಣ ನಿಯಂತ್ರಣಕ್ಕೆ ಬರುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸೋಮವಾರದಿಂದ ಲಾಕ್ ಡೌನ್ ಜಾರಿಗೊಳಿಸಲಾಗಿದೆ.

ಭಾನುವಾರ ರಾಜ್ಯದಲ್ಲಿ47,930 ಜನರಿಗೆ ಸೋಂಕು ಪತ್ತೆಯಾಗಿದ್ದರೆ, 490 ಜನರು ಸಾವಿಗೀಡಾಗಿದ್ದಾರೆ.

ಭಾನುವಾರ ಆಸ್ಪತ್ರೆಯಿಂದ ಒಟ್ಟೂ 31,796 ಜನರು ಬಿಡುಗಡೆಯಾಗಿದ್ದು, ಈವರೆಗೆ ಒಟ್ಟೂ 13,51,097 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಒಟ್ಟೂ ಪತ್ತೆಯಾದ ಸೋಂಕಿತರ ಸಂಖ್ಯೆ 19,34,378. ಸೋಂಕಿತ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 32.71. ರಾಜ್ಯದಲ್ಲಿ ಸಧ್ಯ ಸಕ್ರೀಯ ಪ್ರಕರಣಗಳು 5,64,485. ಸೋಂಕಿನಿಂದ ರಾಜ್ಯದಲ್ಲಿ ಈವರೆಗೆ ಒಟ್ಟೂ 18,776 ಜನರು ಮೃತಪಟ್ಟಿದ್ದಾರೆ. ಅಂದರೆ ಸಾವಿನ ಪ್ರಮಾಣ ಶೇ.1.02.

ಉಳಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಸಮಗ್ರ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ –

ಕನ್ನಡ –  09-05-2021 HMB Kannada

ಇಂಗ್ಲೀಷ್ – 09-05-2021 HMB English

 

18 ವರ್ಷ ಮೇಲ್ಪಟ್ಟವರಿಗೆ ಗುಡ್ ನ್ಯೂಸ್ ; ನಾಳೆಯಿಂದಲೇ ಲಸಿಕೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button