ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ 2ನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಟಫ್ ರೂಲ್ಸ್ ಜಾರಿಗೆ ತಂದಿದ್ದು, ಇಂದು ರಾತ್ರಿ 9 ಗಂಟೆಯಿಂದ ಮುಂದಿನ 57 ತಾಸುಗಳವರೆಗೆ ಕರ್ನಾಟಕ ಸ್ತಬ್ಧಗೊಳ್ಳಲಿದೆ. ವೀಕೆಂಡ್ ಎಂದು ಜನರು ಮನೆಯಿಂದ ಹೊರಗೆ ಹೋಗುವ ಪ್ಲಾನ್ ಮಾಡಿದ್ದರೆ ಅಲರ್ಟ್ ಆಗುವುದು ಉತ್ತಮ.
ಕೊರೊನಾ ಕಠಿಣ ನಿಯಮ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜಾರಿಮಾಡಿರುವ ವಿಕೆಂಡ್ ಕರ್ಫ್ಯೂ ಇಂದು ರಾತ್ರಿಯಿಂದಲೇ ಜಾರಿಗೆ ಬರಲಿದ್ದು, ಜನರ ಓಡಾಡಟಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಕರ್ಫ್ಯೂ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸಿದರೆ ಅಂತಹ ವಾಹನಗಳನ್ನು ಸೀಜ್ ಮಾಡುವುದಾಗಿ ಗೃಹ ಸಚಿವರು ಎಚ್ಚರಿಸಿದ್ದಾರೆ.
ವಾರಾಂತ್ಯದ ಕರ್ಫ್ಯೂ ವೇಳೆ ಅಗತ್ಯ ಸೇವೆ ಹೊರತುಪಡಿಸಿ ಉಳಿದೆಲ್ಲ ಸೇವೆಗಳು ಬಂದ್ ಆಗಲಿದ್ದು, ಔಷಧ ಅಂಗಡಿ, ವೈದ್ಯಕೀಯ ಸೇವೆ ಮಾತ್ರ ಲಭ್ಯವಿರಲಿದೆ. ಬೆಳಿಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಮಾತ್ರ ದಿನಸಿ, ಹಾಲು-ಮೊಸರು, ಹಣ್ಣು-ತರಕಾರಿ ಅಂಗಡಿಗಳು ತೆರೆಯಲು ಅವಕಾಶ ನಿಡಲಾಗಿದೆ.
ಒಟ್ಟಾರೆ ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಟಫ್ ರೂಲ್ಸ್ ಜೊತೆಗೆ ವೀಕೆಂಡ್ ಕರ್ಫ್ಯೂ ಆರಂಭವಾಗಲಿದ್ದು, ಮೈಮರೆತು ನಿಯಮ ಉಲ್ಲಂಘಿಸಿ ಓಡಾಟ ನಡೆಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
ಕೋವಿಡ್ ಲಸಿಕೆ ಕದ್ದು ಪೊಲೀಸ್ ಠಾಣೆ ಎದುರು ತಂದಿಟ್ಟ ಕಳ್ಳರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ