ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಮಹಾಮಾರಿಗೆ ಬ್ರಹ್ಮಾಸ್ತ್ರವಾಗಿರುವ ಕೋವಿಶೀಲ್ಡ್ ಲಸಿಕೆ ರಾಜ್ಯ ರಾಜಧಾನಿ ಬೆಂಗಳೂರಿಗೆ ಬಂದು ತಲುಪಿದೆ.
ಜನವರಿ 16ರಿಂದ ಕೊರೊನಾ ಲಸಿಕೆ ನೀಡಿಕೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಪೂರೈಕೆ ಆರಂಭವಾಗಿದೆ.
ಪುಣೆಯ ಸೀರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿರುವ ಕೋವಿಶೀಲ್ಡ್ ಲಸಿಕೆಯನ್ನು ರಾಜ್ಯದಲ್ಲಿ ಎರಡು ಪ್ರಮುಖ ಸ್ಥಳಗಳಿಗೆ ರವಾನಿಸಲಾಗುತ್ತಿದ್ದು, ಈಗಾಗಲೇ ಪುಣೆಯಿಂದ ಸ್ಪೈಸ್ ಜೆಟ್ ವಿಶೇಷ ವಿಮಾನದಲ್ಲಿ Z+ ಭದ್ರತೆಯ ಮೂಲಕ ಕೋವಿಶೀಲ್ಡ್ ಲಸಿಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ತಲುಪಿದೆ.
54 ಬಾಕ್ಸ್ ಗಳಲ್ಲಿ 7,94,500 ಡೋಸ್ ಕೋವಿಶೀಲ್ಡ್ ಲಸಿಕೆ ಬಂದಿದ್ದು, ಅಲ್ಲಿಂದ ಬೆಂಗಳೂರಿನ ವ್ಯಾಕ್ಸಿನ್ ಸೆಂಟರ್ ಗೆ ಲಸಿಕೆ ರವಾನಿಸಲಾಗುತ್ತಿದೆ. ಬಳಿಕ ರಾಜ್ಯದ ವಿವಿಧ ಜಿಲ್ಲೆಗಳ ಕೋವಿಡ್ ಲಸಿಕಾ ಕೇಂದ್ರಗಳಿಗೆ ಪೂರೈಸಲಾಗುತ್ತದೆ.
ಇಂದು ಸಂಜೆ ನೂತನ ಸಚಿವರ ಪಟ್ಟಿ ಬಿಡುಗಡೆ
ಡ್ರಗ್ಸ್ ಪ್ರಕರಣ; ನಾಪತ್ತೆಯಾಗಿದ್ದ ಆದಿತ್ಯ ಆಳ್ವ ಕೊನೆಗೂ ಅರೆಸ್ಟ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ